ಪೊಲೀಸ್ ಸಿಬಂದಿಯ ಕೊಲೆ ಯತ್ನಿಸಿದ ಆರೋಪಿಗಳಿಗೆ 10 ವರ್ಷ ಜೈಲು

ಪೊಲೀಸ್ ಸಿಬಂದಿಯ ಕೊಲೆ ಯತ್ನಿಸಿದ ಆರೋಪಿಗಳಿಗೆ 10 ವರ್ಷ ಜೈಲು


ಮಂಗಳೂರು: ಉಲ್ಳಾಲದಲ್ಲಿ ಪೊಲೀಸ್ ಸಿಬಂದಿಯನ್ನು ಕೊಲೆ ಮಾಡಲು ಯತ್ನಿಸಿದ ಹಳೇ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲು ಮತ್ತು ತಲಾ 16 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.  

ಉಳ್ಳಾಲ ನಿವಾಸಿಗಳಾದ ಒಂದನೇ ಆರೋಪಿ ಮುಸ್ತಾಕ್ (32) ಮತ್ತು ನಾಲ್ಕನೇ ಆರೋಪಿ ಜಾಕೀರ್ (36) ಶಿಕ್ಷೆಗೊಳಗಾದವರು. ಎರಡನೇ ಆರೋಪಿ ಯಾಸೀನ್ ಮತ್ತು ಮೂರನೇ ಆರೋಪಿ ಅಶ್ರ್ ಸಮೋಸ (50) ತಲೆ ಮರೆಸಿಕೊಂಡಿದ್ದಾರೆ. 2015ರ ಡಿಸೆಂಬರ್ 17ರಂದು ರಾತ್ರಿ 11.15ರ ವೇಳೆ ಆರೋಪಿತ ನಾಲ್ಕು ಮಂದಿ ಉಳ್ಳಾಲ ಗ್ರಾಮದ ಉಳ್ಳಾಲ ಸೈಯದ್ ಮದನಿ ದರ್ಗಾದ ಮುಖ್ಯ ದ್ವಾರದ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಉಳ್ಳಾಲ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಉಮೇಶ್ ಮತ್ತು ಕಾನ್‌ಸ್ಟೇಬಲ್ ರವೀಂದ್ರ ಸ್ಥಳಕ್ಕೆ ತೆರಳಿ ವಿಚಾರಿಸಿದ್ದರು. 

 ಚಾಕು ಹಿಡಿದು ತವಿಯಲು ಮುಂದಾಗಿದ್ದ ಆರೋಪಿಗಳು:

 ಈ ವೇಳೆ ಆರೋಪಿಗಳು ಅವಾಚ್ಯ ಶಬ್ಧದಿಂದ ನಿಂಧಿಸಿ ನಿಮ್ಮಲ್ಲಿ ಒಬ್ಬರನ್ನು ಕೊಲೆಮಾಡಿದರೆ ಬುದ್ದಿ ಬರುವುದು ಎಂದು ಹೇಳಿ, ಒಂದನೇ ಆರೋಪಿ ಮುಸ್ತಾಕ್ ತನ್ನ ಕೈಯಲ್ಲಿದ್ದ ಚಾಕುವಿನಿಂದ ರವೀಂದ್ರ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಎದೆಗೆ ತಿವಿಯಲು ಬಂದಾಗ ಉಮೇಶ್ ತಡೆದಿದ್ದಾರೆ. ಈ ವೇಳೆ ಒಂದನೇ ಆರೋಪಿ ಮತ್ತು ಇತರರು ರವೀಂದ್ರ ಅವರ ಕೈಗಳನ್ನು ಹಿಡಿದು ಬಲವಾಗಿ ತಿರುಗಿಸಿದ್ದು, ಮುಸ್ತಾಕ್ ಚೂರಿಯಿಂದ ತಿವಿದು ರವೀಂದ್ರ ಅವರ ಎಡಕೈಗೆ ರಕ್ತಬರುವಂತೆ ಹಲ್ಲೆ ಮಾಡಿದ್ದಾನೆ. ಉಮೇಶ್ ಅವರಿಗೂ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

 

 ಒಂದು ಮತ್ತು ನಾಲ್ಕನೇ ಆರೋಪಿಗಳಿಗೆ ಶಿಕ್ಷೆ 

 ಉಳ್ಳಾಲ ಠಾಣೆಯ ಆಗಿನ ಪಿಎಸ್‌ಐ ಗುರಪ್ಪ ಕಾಂತಿ ಅವರು ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಅವರು ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದು ಮತ್ತು ನಾಲ್ಕನೇ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಐಪಿಸಿ ಕಲಂ 504ರಡಿ 2 ವರ್ಷ ಕಾರಾಗೃಹವಾಸ ಮತ್ತು 2 ಸಾವಿರ ರೂ. ದಂಡ, 506 ರಡಿ 7 ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ, 353ರಡಿ 2 ವರ್ಷ ಜೈಲು 2 ಸಾವಿರ ರೂ. ದಂಡ, 332ರಡಿ 2 ವರ್ಷ ಜೈಲು 2 ಸಾವಿರ ರೂ. ದಂಡ, 307ರಡಿ 10 ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರಿ ಅಭಿಯೋಜಕರಾದ ಬಿ.ಶೇಖರ್ ಅವರು ಇಬ್ಬರು ಸಾಕ್ಷಿದಾರರ ವಿಚಾರಣೆ ನಡೆಸಿದ್ದರು. ಉಳಿದ ಸಾಕ್ಷಿದಾರರ ವಿಚಾರಣೆ ಮತ್ತು ವಾದ ಮಂಡನೆಯನ್ನು ಸರ್ಕಾರಿ ಅಭಿಯೋಜಕ ಚೌಧರಿ ಮೋತಿಲಾಲ್ ಅವರು ಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article