ಮೇಯರ್ ಹಾಗೂ ಉಪಮೇಯರ್‌ಗೆ ಜಿಲ್ಲಾ ಬಿಜೆಪಿಯಿಂದ ಗೌರವಾರ್ಪಣೆ
Saturday, September 21, 2024
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಬಾನುಮತಿ ಪಿ.ಎಸ್. ಅವರನ್ನು ಸೆ.19 ರಂದು ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಅಭಿನಂದಿಸಲಾಯಿತು.
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಡಾ. ವೈ ಭರತ್ ಶೆಟ್ಟಿ, ನಿಕಟ ಪೂರ್ವ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಪ್ರಮುಖರಾದ ನಿತಿನ್ ಕುಮಾರ್, ಮನೋಹರ್ ಕದ್ರಿ, ಸುಮಿತ್ರಾ ಕರಿಯ, ವೀಣಾ ಮಂಗಳ, ಸರಿತಾ ಶಶಿಧರ್ ಮತ್ತಿತರರು ಉಪಸ್ಥಿತರಿದ್ದರು.