ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ
Monday, September 23, 2024
ಮಂಗಳೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀ ಅವರ ಜನ್ಮ ದಿನದ ಪ್ರಯುಕ್ತ ಪ್ರಥಮ ಹಂತದ ಕಾರ್ಯಕ್ರಮ ಸೆ.17 ರಿಂದ 24 ರವರೆಗೆ ಮೋದಿಜೀಯವರ ಆಶಯದಂತೆ ಸ್ವಚ್ಛ ಭಾರತ ಅಭಿಯಾನದ ಪ್ರಯುಕ್ತ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಇಂದು 41ನೇ ಸೆಂಟ್ರಲ್ ವಾರ್ಡಿನಲ್ಲಿ ಇರುವ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಸ್ಥಳೀಯ ಮನಪಾ ಸದಸ್ಯೆ ಹಾಗೂ ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮಾ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಕಮಲಾಕ್ಷಿ, ಶಬರಿ ಶೆಟ್ಟಿ, ಮತ್ತು ಮನಪಾ ಸದಸ್ಯೆ ಹಾಗೂ ಮಹಿಳಾ ಮೋರ್ಚಾದ ಕಾರ್ಯದರ್ಶಿ ಲೀಲಾವತಿ ಪ್ರಕಾಶ್, ಮತ್ತು ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.




