ಪರಿಷತ್ ಚುನಾವಣೆ: ನಾಳೆ ಅಧಿಸೂಚನೆ
Wednesday, September 25, 2024
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪ ಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆ. 26 ರಂದು ಅಧಿಸೂಚನೆ ಪ್ರಕಟವಾಗಲಿದೆ. ಅ.3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅ.4 ರಂದು ನಾಮಪತ್ರಗಳ ಪರಿಶೀಲನೆ, ಅ.7 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ನಿಷೇಧಾಜ್ಞೆ ಜಾರಿ..
ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಜಾರಿಗೊಳಿಸಿದ್ದಾರೆ.