ಡಾ. ಎಂ. ಪ್ರಭಾಕರ ಜೋಶಿಯವರಿಗೆ ‘ಕಾರಂತ ಪ್ರಶಸ್ತಿ’
Saturday, September 28, 2024
ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮತ್ತು ಕಾರಂತ ಹುಟ್ಟುಹಬ್ಬ ಆಚರಣಾ ಸಮಿತಿಯು ಈ ವರ್ಷದ ‘ಕಾರಂತ ಪ್ರಶಸ್ತಿ’ಗೆ ಖ್ಯಾತ ಅರ್ಥಧಾರಿ, ನಿವೃತ್ತ ಪ್ರಾಧ್ಯಾಪಕ, ಆಪ್ತ ಸಲಹೆಗಾರ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 10ರಂದು ಮಂಗಳೂರಿನಲ್ಲಿ ನಡೆಯಲಿರುವ ‘ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬದ ಸಮಾರಂಭದ’ಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.