ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ಸ್ವಚ್ಚತಾ ಹಿ ಸೇವಾ ಅಭಿಯಾನ’
Saturday, September 28, 2024
ಮಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ.. ಮಂಗಳೂರು ವತಿಯಿಂದ, ಜಿಲ್ಲಾ ನ್ಯಾಯಾಂಗ ಇಲಾಖೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಮಂಗಳೂರು ಹಾಗೂ ನ್ಯಾಯಾವಾಧಿಗಳ ಸಂಘ ಮಂಗಳೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದು ‘ಸ್ವಚ್ಚತಾ ಹಿ ಸೇವಾ ಅಭಿಯಾನವನ್ನು’ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ., ಮಂಗಳೂರಿನ ಪ್ರಭಾರ ಅಧ್ಯಕ್ಷರು ಹಾಗೂ 1ನೇ ಹೆಚ್ಚುವರಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಹೆಚ್.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಚ್ಚತೆಯ ಬಗ್ಗೆ ಮಾತನಾಡಿ, ಎಲ್ಲರೂ ಸ್ವಚ್ಚತೆಯನ್ನು ಕಾಪಾಡಿ ಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ನ್ಯಾಯಾದೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಕಿರಿಯ ನ್ಯಾಯಾಧೀಶರು, ವಕೀಲರ ಸಂಘದ ಅಧ್ಯಕ್ಷರ ರಾಘವೇಂದ್ರ ಹೆಚ್.ವಿ., ಹಾಗೂ ನ್ಯಾಯಾಲಯದ ಎಲ್ಲಾ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನ್ಯಾಯಾಲಯದ ಆವರಣವನ್ನು ಸ್ವಚ್ಚಗೊಳಿಸಲಾಯಿತು.
