ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಮಂಗಳೂರು: ಯುವ ಸಬಲೀಕರಣ  ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೋಮವಾರ ನಡೆಯಿತು.

ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟವನ್ನು ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಸುಧಾಕರ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್, ಮಂಗಳೂರು ಉತ್ತರ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಿತಿನ್ ಪುತ್ರನ್, ಜಿಲ್ಲಾ ಉದ್ಯೋಗಾಧಿಕಾರಿ ವೈ.ಎಂ ಬಡಿಗೇರ್ ಉಪಸ್ಥಿತರಿದ್ದರು.

ನಂತರ ಅಥ್ಲೆಟಿಕ್, ವಾಲಿಬಾಲ್, ಫುಟ್ಬಾಲ್, ಖೋ ಖೋ, ಕಬಡ್ಡಿ, ತ್ರೋಬಾಲ್ ಮತ್ತಿತರ ಕ್ರೀಡಾಕೂಟಗಳು ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article