ಭಾನುವಾರದ ಸಂತೆ ವ್ಯಾಪಾರಿಗಳಿಗೆ ಐಡಿ ಕಾರ್ಡ್, ಪ್ರಮಾಣ ಪತ್ರ ನೀಡಲು ಜಿಲ್ಲಾಧಿಕಾರಿಗಳಿಗೆ ಮನವಿ
Friday, September 27, 2024
ಮಂಗಳೂರು: ಕಳೆದ ಹಲವು ವರ್ಷಗಳಿಂದ ನಗರದ ಪುರಭವನದ ಬಳಿ ಸಂತೆ ವ್ಯಾಪಾರ ಮಾಡುತ್ತಿರುವ ಬಡ ಬೀದಿಬದಿ ವ್ಯಾಪಾರಿಗಳನ್ನು 667ರ ಪಟ್ಟಿಯಿಂದ ಕೈಬಿಟ್ಟು ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಐಟಿಯು ಸಂಯೋಜಿತ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ವಾರದ ಸಂತೆ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಐಡಿ ಕಾರ್ಡ್, ಪ್ರಮಾಣ ಪತ್ರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮನವಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ನಿಯೋಗದಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಜ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಎಸ್., ಉಪಾಧ್ಯಕ್ಷರಾದ ವಿಜಯ್, ಸಿಕಂದರ್, ವಾರದ ಸಂತೆ ವಿಭಾಗ ಸಮಿತಿಯ ಶಿವಾನಂದ,ಮಂಜುನಾಥ, ಗದಿಗಪ್ಪ, ಷರೀಫ್ ಸಾಬ್, ಕಳಕಪ್ಪ, ಸಿದ್ದಪ್ಪ, ಬಶೀರ್ ಸಾಬ್ ಉಪಸ್ಥಿತರಿದ್ದರು.



