ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಬೆಂಬಲ ಕೋರಿ ಶಾಸಕರಿಗೆ ಮನವಿ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಬೆಂಬಲ ಕೋರಿ ಶಾಸಕರಿಗೆ ಮನವಿ


ಮಂಗಳೂರು: ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಸಂಘದ ಸದಸ್ಯರು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಭೇಟಿಯಾಗಿ ಬೆಂಬಲವನ್ನು ಕೋರಿ ಮನವಿಯನ್ನು ಸಲ್ಲಿಸಿದರು.

ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಪೂರ್ಣ ಬೆಂಬಲವನ್ನು ಸೂಚಿಸಿದಲ್ಲದೆ, ಮುಂದಿನ ಅಧಿವೇಶನದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠದ  ಬಗ್ಗೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು ಹಾಗೂ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ಸಂಘದ ಮುಂದಿನ ಹೋರಾಟಕ್ಕೆ ಪೂರ್ಣ ಬೆಂಬಲವನ್ನು ಸೂಚಿಸಿದರು. 

ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ., ಸಂಘದ ಮಾಜಿ ಕೋಶಾಧಿಕಾರಿ ವಿನಯ ಕುಮಾರ್, ಮಂಗಳೂರು ವಕೀಲರ ಸಂಘದ ಸದಸ್ಯರಾದ ಜಗದೀಶ್, ಜಾಕಿರ್ ಹುಸೈನ್, ಪ್ರಸಾದ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article