ಡಿಸೆಂಬರ್ 10-15 ವರೆಗೆ 30ನೇ ವರ್ಷದ ಆಳ್ವಾಸ್ ವಿರಾಸತ್: ಡಾ.  ಡಾ. ಎಂ. ಮೋಹನ ಆಳ್ವ

ಡಿಸೆಂಬರ್ 10-15 ವರೆಗೆ 30ನೇ ವರ್ಷದ ಆಳ್ವಾಸ್ ವಿರಾಸತ್: ಡಾ. ಡಾ. ಎಂ. ಮೋಹನ ಆಳ್ವ


ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 'ಆಳ್ವಾಸ್ ವಿರಾಸತ್-2024'  ಈ ವರ್ಷ ಡಿಸೆಂಬರ್ 10-15ರ ವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ  ನಡೆಯಲಿದೆ ಎಂದು ವಿರಾಸತ್ ನ ರೂವಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

30ರ ಹರೆಯದಲ್ಲಿರುವ ವಿರಾಸತ್ ನ ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು 'ಆಳ್ವಾಸ್ ವಿರಾಸತ್-2024'ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ.

ಅಳ್ವಾಸ್ ವಿರಾಸತ್-2024 ಡಿಸೆಂಬರ್ 10  ಮಂಗಳವಾರದಂದು ಪ್ರಾರಂಭವಾಗಿ  15ರ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ. ಗುರುವಾರ, ಶುಕ್ರವಾರ ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. 

ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ ದಿನಾಂಕ 15  ಭಾನುವಾರದಂದು ಕೇವಲ ವಸ್ತುಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ.

ಆಳ್ವಾಸ್ ಸಾಂಸ್ಕೃತಿಕ ಉತ್ಸವಕ್ಕೆ ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಆಳ್ವರು ತಿಳಿಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article