ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳಿಂದ ಮೂಡುಬಿದಿರೆಯಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳಿಂದ ಮೂಡುಬಿದಿರೆಯಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ


ಮೂಡುಬಿದಿರೆ: ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ಗುರುವಾರ ತಾಲೂಕು ಕಛೇರಿ ಮುಂಭಾಗ ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಂಡರು. 

ಗ್ರಾಮ ಆಡಳಿತಾಧಿಕಾರಿಗಳ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಮಾತನಾಡು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು, ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಮುಷ್ಕರದಲ್ಲಿ ಆಗ್ರಹಿಸಿದರು.

ನಂತರ ತಾಲೂಕು ತಹಶೀಲ್ದಾರ್ ಪ್ರದೀಪ್ ಹುರ್ಡೇಕರ್ ಅವರಿಗೆ ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ರಾದ ರಾಮ್, ತಿಲಕ್, ಬಾಲಚಂದ್ರ, ಕಂದಾಯ ನಿರೀಕ್ಷಕ ಮಂಜುನಾಥ್ ಉಪಸ್ಥಿತರಿದ್ದರು. 

ತಾಲೂಕು ಘಟಕದ ಕಾರ್ಯದರ್ಶಿ ಉಷಾ ಮತ್ತು ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು ಇದರ ನಿರ್ದೇಶನದಂತೆ ಮೂಡುಬಿದಿರೆ ಘಟಕದ ವತಿಯಿಂದ ಅನಿರ್ಧಿಷ್ಠಾವಧಿ ಮುಷ್ಕರವನ್ನು ಕೈಗೊಳ್ಳಲಾಗಿದೆ.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article