ವಿದ್ಯಾರ್ಥಿಗೆ ಕಾರು ಢಿಕ್ಕಿ: ಸಾವು
Thursday, September 26, 2024
ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ದುರ್ದೈವಿ.
ವಿದ್ಯಾರ್ಥಿ ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ ಹೊರಟಿದ್ದು ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಆದಿತ್ಯ ಹೆದ್ದಾರಿಯಿಂದ ಚರಂಡಿಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಕಾರಿನವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯಾರಿಗೋ ಉಪಕಾರ ಮಾಡಲೆಂದು ಹೋಗಿ ಈ ಸ್ಥಳದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದ್ದು ಇದರಿಂದಾಗು ಎದುರಿನಲ್ಲಿ ಬರುತ್ತಿರುವ ವಾಹನಗಳು ಗಮನಕ್ಕೆ ಬಾರದೆ ಇರುವುದರಿಂದ ಇಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಇಂದು ವಿದ್ಯಾರ್ಥಿಯೋರ್ವನನ್ನು ಬಲಿ ತೆಗೆದುಕೊಂಡಿದೆ.