ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಇಂದು ಎಂ. ನೇಮಕ
Monday, September 23, 2024
ಮೂಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಇಂದು ಎಂ. ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ನೇಮಕಗೊಂಡಿದ್ದಾರೆ.
ಇಂದು ಎಂ. ಅವರು ಮೂಡಬಿದ್ರೆ ಪುರಸಭೆಯ ಮುಖ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಹೆಚ್ಚುವರಿಯಾಗಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಯಾಗಿ ನೇಮಿಸಲಾಗಿದೆ.
ಇಂದು ಎಂ. ಅವರು ಈ ಹಿಂದೆ ಮೂಲ್ಕಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿ ಮೂಲ್ಕಿ ನಗರವನ್ನು ಸ್ವಚ್ಛತೆ ಮೂಲಕ ಮಾದರಿಯಾಗಿಸಿ ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ಪಡೆದು ಜನಮನ್ನಣೆ ಗಳಿಸಿದ್ದರು.
ಕಳೆದ ದಿನಗಳ ಹಿಂದೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತ ದಾಳಿ ನಡೆದು ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ ಅವರು ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು ಮುಖ್ಯಾಧಿಕಾರಿ ಸ್ಥಾನ ತೆರವಾಗಿತ್ತು.