ಕಾಲೇಜು ವಿದ್ಯಾರ್ಥಿನಿ ಡೆತ್ ನೋಟ್ ಬರೆದು ನೇಣು ಬಿಗಿದು ಆತ್ಮಹತ್ಯೆ
Sunday, September 29, 2024
ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ನಲ್ಲಿ ವಾಸ್ತವ್ಯವಿದ್ದ ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬವರ ಪುತ್ರಿ ಉಜ್ವಲ (17) ಶನಿವಾರ ಸಂಜೆ ರೈಲ್ವೇ ಕ್ವಾಟರ್ಸ್ನ ಮನೆಯ ಎದುರು ಬದಿಯ ಕೋಣೆಯಲ್ಲಿ ಡೆತ್ ನೋಟ್ ಬರೆದಿಟ್ಟು ಶನಿವಾರ ಸಂಜೆ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತ ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿಸಿಕೊಂಡು ಮನೆ ಕಡೆ ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಏಕಾ ಏಕಿ ಈ ಕೃತ್ಯ ಎಸಗಿದ್ದಾಳೆ.
ಈಕೆ ಆತ್ಮಹತ್ಯೆ ಸಂದರ್ಭ ತಂದೆ ಮಹೇಶ್ ನಾಯಕ್ ಮೈಲೊಟ್ಟು ರೈಲ್ವೇ ಗೇಟ್ ಬಳಿ ಕರ್ತವ್ಯಕ್ಕೆ ಹಾಜರಾಗಿದ್ದು, ತಾಯಿ ಊರಾದ ಭಟ್ಕಳಕ್ಕೆ ತೆರಳಿದ್ದು, ಮೃತಳ ಅಣ್ಣ ಮುಕ್ಕ ಕಾಲೇಜಿನಲ್ಲಿ ಕಲಿಯುತ್ತಿದ್ದು, ಕಾಲೇಜು ಮುಗಿಸಿ ಸಂಜೆ 6.30 ಗಂಟೆ ಸುಮಾರಿಗೆ ಮನೆಗೆ ಬಂದು ನೋಡುವಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಮೃತಳ ರೂಮ್ನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಗ್ಗೆ ಬರೆದಿದ್ದಾಳೆ. ತೋಟದ ಮನೆಯಲ್ಲಿ ಅಂತಿಮ ಕ್ರಿಯೆ ನಡೆಸಬೇಕು ಎಂದು ತಿಳಿಸಿದ್ದಾಳೆ.
ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.