ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಥ್ರೋಬಾಲ್ ಪಂದ್ಯಾವಳಿ ಸಮಾರೋಪ: ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ ಜಿಲ್ಲಾ ಪದವಿ ಪೂರ್ವ ವಿಭಾಗದ ಥ್ರೋಬಾಲ್ ಪಂದ್ಯಾವಳಿ ಸಮಾರೋಪ: ವಿಜೇತರಿಗೆ ಬಹುಮಾನ ವಿತರಣೆ


ಶಿರ್ವ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವ ಆಶ್ರಯದಲ್ಲಿ ಗುರುವಾರ ಶಿರ್ವದ ಹಿಂದೂ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾವಳಿ ಸಮಾಪನಗೊಂಡಿತು.

ಬಾಲಕರ ವಿಭಾಗ: ಪ್ರಥಮ: ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವ, ದ್ವಿತೀಯ: ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು, ಕಾರ್ಕಳ. ಬಾಲಕಿಯರ ವಿಭಾಗ: ಪ್ರಥಮ: ಎಸ್.ಎಮ್.ಎಸ್. ಪಿ.ಯು. ಕಾಲೇಜು, ಬ್ರಹ್ಮಾವರ. ದ್ವಿತೀಯ: ಹಿಂದೂ ಪದವಿ ಪೂರ್ವ ಕಾಲೇಜು, ಶಿರ್ವ

ಸಮಾರೋಪ ಸಮಾರಂಭದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಪ್ರಾಂಶುಪಾಲ ಡಾ. ಮಿಥುನ್ ಚಕ್ರವರ್ತಿ ಮತ್ತು ಹಿಂದೂ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಕಿಲಾ ಅತಿಥಿಗಳಾಗಿ ಪಾಲ್ಗೊಂಡು ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಣೆ ಮಾಡಿದರು.

ಪಂದ್ಯಾವಳಿಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ 7 ಬಾಲಕರ ಮತ್ತು 7 ಬಾಲಕಿಯರ ತಂಡಗಳು ಭಾಗವಹಿಸಿದ್ದವು. 

ಶಾಲಾ ಮುಖ್ಯೋಪಾಧ್ಯಾಯಿನಿ ವಸಂತಿ, ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ ಶೆಟ್ಟಿ ಉಪಸ್ಥಿತರಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಎ. ಸ್ವಾಗತಿಸಿ, ದೈಹಿಕ ಶಿಕ್ಷಣ ಉಪನ್ಯಾಸಕ ವಂದಿಸಿ, ಇನ್ನಂಜೆ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article