ಕಸ್ತೂರಿ ರಂಗನ್ ವರದಿ ತಿರಸ್ಕರಿಸಿರುವುದು ಸ್ವಾಗತಾರ್ಹ: ಸುಳ್ಯ ಬ್ಲಾಕ್ ಕಾಂಗ್ರೆಸ್

ಕಸ್ತೂರಿ ರಂಗನ್ ವರದಿ ತಿರಸ್ಕರಿಸಿರುವುದು ಸ್ವಾಗತಾರ್ಹ: ಸುಳ್ಯ ಬ್ಲಾಕ್ ಕಾಂಗ್ರೆಸ್

ಸುಳ್ಯ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರಕಾರ ತಿರಸ್ಕರಿಸಿರುವುದು ಸ್ವಾಗತಾರ್ಹ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಹೇಳಿದೆ. 

ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಗ್ರಾಮಗಳ ಅರಣ್ಯದಂಚಿನಲ್ಲಿ ಕೃಷಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಕೃಷಿಕರಿಗೆ ಸಮಸ್ಯೆ ಆಗಬಾರದು ಎಂಬುದು ಪಕ್ಷದ ನಿಲುವು. ಆ ಹಿನ್ನಲೆಯಲ್ಲಿ ಸರಕಾರದ ಕ್ರಮವನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಭಾರತಕ್ಕೆ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿರುವುದರಿಂದ ಅಡಿಕೆ ದರ ನೆಲಕಚ್ಚಲು ಕಾರಣವಾಗಬಹುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ, ಕಾಂಗ್ರೆಸ್  ಮುಖಂಡರಾದ ಕೆ.ಗೋಕುಲ್‌ದಾಸ್, ಸುರೇಶ್ ಎಂ.ಎಚ್, ಶಶಿಧರ ಎಂ.ಜೆ, ನಂದರಾಜ ಸಂಕೇಶ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article