ಗುತ್ತಿಗಾರು ಪಿ.ಎಂ.ಶ್ರೀ.ಹಿ.ಪ್ರಾ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ಗುತ್ತಿಗಾರು ಪಿ.ಎಂ.ಶ್ರೀ.ಹಿ.ಪ್ರಾ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ


ಸುಳ್ಯ: ದ.ಕ. ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಪಿ.ಎಂ ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗ ಈ ಸಂಸ್ಥೆಗಳ ಸಯುಕ್ತ ಆಶಯದಲ್ಲಿ ನಡೆಯುವ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದ ಎರಡನೇ ದಿನ ಸೆ.೨೧ ರಂದು ಪ್ರೌಢಶಾಲಾ ಪಂದ್ಯಾಟ ಉದ್ಘಾಟನೆಗೊಂಡಿತು.

ಸಭೆಯ ಅಧ್ಯಕ್ಷತೆಯನ್ನು ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಗೌಡ ಕಾಂತಿಲ ಅಧ್ಯಕ್ಷತೆ ವಹಿಸಿದ್ದರು. ಅಭಯ ಚಾರಿಟೇಬಲ್ ಟ್ರಸ್ಟ್ ದ.ಕ. ಜಿಲ್ಲಾ ಅಧ್ಯಕ್ಷ ಅಶೋಕ್ ನೆಕ್ರಾಜೆ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. 

ಪಿ.ಎಂ. ಶ್ರೀ.ಸ.ಮಾ.ಹಿ.ಪ್ರಾ. ಶಾಲೆ ಇದರ ಎಸ್‌ಡಿಎಂಸಿಯ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಮುತ್ಲಾಜೆ, ಕಬಡ್ಡಿ ಅಸೋಸಿಯೇಷನ್‌ನ ಮಾಧವ ಬಿ.ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಸ್ವಾಗತಿಸಿದರು. ಸುಳ್ಯ ದೈಹಿಕ ಪರಿವೀಕ್ಷಕ ಆಶಾ ನಾಯಕ್, ಶಿಕ್ಷಣ ವಲಯ ಸಮೂಹ ಸಂಪನ್ಮೂಲ ಅಧಿಕಾರಿ ಕುಶಾಲಪ್ಪ ತುಂಬತ್ತಾಜೆ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ತುಕಾರಾಂ ಏನೆಕಲ್ಲು, ಸರ್ಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರಾಂಶುಪಾಲೆ ಚೆನ್ನಮ್ಮ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ, ಪಿ.ಎಂ.ಶ್ರೀ ಶಾಲಾ ಮುಖ್ಯೋಪಾಧ್ಯಾಯಿನಿ ಉಮಾವತಿ, ಪ್ರಾಥಮಿಕ ದೈಹಿಕ ಶಿಕ್ಷಣ ಸಂಘ  ಅಧ್ಯಕ್ಷ ಧನಂಜಯ ಎನ್, ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ನಿರ್ದೇಶಕ ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article