ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕಿ ಪ್ರೊ. ದಿವ್ಯ ಎ.ಕೆ. ಅವರಿಗೆ ಡಾಕ್ಟರೇಟ್ ಪಸವಿ
Sunday, September 29, 2024
ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ದಿವ್ಯ ಎ.ಕೆ., ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಇವರು ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿರುವ ಡಾ. ಉಜ್ವಲ್ ಯು.ಜೆ. ಹಾಗೂ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಆಗಿರುವ ಡಾ. ಭಾಗ್ಯ ಹೆಚ್.ಕೆ. ಇವರ ಮಾರ್ಗದರ್ಶನದಲ್ಲಿ ಡಾರ್ಕ್ನೆಸ್ ರಿವರ್ಸಲ್ ಆಂಡ್ ರಿಪ್ಲೆಕ್ಚನ್ ರಿಡಕ್ಷನ್ ಆಫ್ ಡಾರ್ಕ್ ಐ ಗ್ಲಾಸಸ್ ಇನ್ ವೀಡಿಯೋಸ್ ಯೂಸಿಂಗ್ ಎನ್‌ಹಾನ್ಸ್ಮೆಂಟ್ ಟೆಕ್ನಿಕ್ಸ್ ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಣೆಗೊಂಡಿದೆ.
ಇವರು ನಾರಾಯಣ ಗೌಡ ಅಗಲ್ಪಾಡಿ ಮತ್ತು ಜಾನಕಿ ದಂಪತಿಗಳ ಪುತ್ರಿ ಹಾಗೂ ಇಂಜಿನಿಯರ್ ಭಾಸ್ಕರ ಮೇರ್ಕಜೆಯವರ ಪತ್ನಿ. ಇವರು ಸುಮಾರು 20 ವರ್ಷಗಳಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.