ಶ್ರೀ ಸಾಯಿ ಈಶ್ವರ್ ಗುರೂಜಿಯವರ 108 ದಿನ 108 ಕ್ಷೇತ್ರ ಪ್ರದಕ್ಷಿಣೆ ನಾಳೆಗೆ ಸಂಪೂರ್ಣ

ಶ್ರೀ ಸಾಯಿ ಈಶ್ವರ್ ಗುರೂಜಿಯವರ 108 ದಿನ 108 ಕ್ಷೇತ್ರ ಪ್ರದಕ್ಷಿಣೆ ನಾಳೆಗೆ ಸಂಪೂರ್ಣ


ಉಡುಪಿ: ಏಕ ಜಾತಿ ಧರ್ಮ ಪೀಠ ದ್ವಾರಕಾಮಾಯಿ ಮಠದ ಪೀಠಾಧೀಶ್ವರಾದ ಶ್ರೀ ಸಾಯಿ ಈಶ್ವರ್ ಗುರೂಜಿಯವರ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯನ್ನು ಜೂನ್ 14 ರಂದು ಶ್ರೀ ಕ್ಷೇತ್ರ ಕಟೀಲಿನಲ್ಲಿ ಪ್ರಾರಂಭಿಸಿ ಸಪ್ಟೆಂಬರ್ 29 ರಂದು 108 ಕ್ಷೇತ್ರ ಕೊಲ್ಲೂರಿನಲ್ಲಿ ಸಂಪೂರ್ಣಗೊಳ್ಳಲಿದೆ.

108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರು, ಮುಖ್ಯಸ್ಥರಿಗೆ ಧರ್ಮ-ರಾಷ್ಟ, ಯೋಧರು ಮತ್ತು ಗೋವುಗಳ ರಕ್ಷಣೆ, ಮತಾಂತರ ತಡೆಯುವ ಬಗ್ಗೆ ಮನವಿಯನ್ನು ನೀಡಿ ಕ್ಷೇತ್ರದ ಇತಿಹಾಸವನ್ನು ತಿಳಿದು ಬಿಲ್ವ ಪತ್ರೆಯ ಗಿಡವನ್ನು ನೀಡಿ ಪ್ರಾರ್ಥನೆಯನ್ನು ಸಲ್ಲಿಸಿರುತ್ತಾರೆ.

ಸೆ.29 ರಂದು ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ಕೊಲ್ಲೂರಿನಲ್ಲಿ ಚಂಡಿಕಾಯಾಗ, ಶಂಕರಪುರದ ಶ್ರೀ ದ್ವಾರಕಾಮಾಯಿ ಸಾಯಿಬಾಬ ಮಂದಿರದ  ಪೀಠಾಧೀಶ್ವರರಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಪರಿಸಮಾಪ್ತಿಯ ಪ್ರಯುಕ್ತ “ಅಷ್ಟೋತ್ತರ ಶತ ಪುಣ್ಯ ಕ್ಷೇತ್ರ ಯಾತ್ರಾ ಮಂಗಲೋತ್ಸವ”, ಇದರ ಅಂಗವಾಗಿ 108 ನೇ ದಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ  ದಿವ್ಯ ಸನ್ನಿಧಿಯಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ  ಬೆಳಿಗ್ಗೆ 11 ಗಂಟೆಗೆ ಶ್ರೀ ಸಾಯಿ ಈಶ್ವರ್ ಗುರೂಜಿಯವರ ನೇತೃತ್ವದಲ್ಲಿ ನಡೆಯಲಿದೆ. 

ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ದೇಶ ಭಕ್ತರು, ಸಾಧು-ಸಂತರು, ಯೋಧರು ಹಾಗೂ ಮಠದ ಅಭಿಮಾನಿ ಭಕ್ತರು ಭಾಗವಹಿಸಲಿದ್ದಾರೆ ಎಂದು ಶ್ರೀ ಸಾಯಿ ಈಶ್ವರ್ ಗುರೂಜಿಯವರು  ತಿಳಿಸಿದರು.

 ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಟ್ರಸ್ಟನ ಅಧ್ಯಕ್ಷ ಸುಧಾಕರ ಶೆಟ್ಟಿ, ಮಠದ ಟ್ರಸ್ಟಿ ಗೀತಾಂಜಲಿ ಎಮ್. ಸುವರ್ಣ, ವೀಣಾ ಎಸ್. ಶೆಟ್ಟಿ ಮತ್ತು ರಾಘವೇಂದ್ರ ಕಾರ್ವಲು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article