ಅಗ್ನಿ ಶಾಮಕ ಕ್ರೀಡಾಕೂಟದಲ್ಲಿ ಚಿನ್ನದ ಪದಕ
Sunday, September 22, 2024
ಉಡುಪಿ: ಡೆನ್ಮಾರ್ಕ್‌ನಲ್ಲಿ ನಡೆದ 15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ ಉಡುಪಿ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಅಶ್ವಿನ್ ಸನಿಲ್ ಮತ್ತು ಕುಮಟಾ ಅಗ್ನಿಶಾಮಕ ಸಿಬ್ಬಂದಿ ರಾಜೇಶ್ ಮಡಿವಾಳ ಚಿನ್ನದ ಪದಕದೊಂದಿಗೆ ಭಾರತಕ್ಕೆ ಹಿಂತಿರುಗಿದ್ದಾರೆ.
ಅಶ್ವಿನ್ ಸನಿಲ್ 83 ಕೆಜಿ ವಿಭಾಗದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ, 80 ಕೆಜಿ ಪ್ಲಸ್ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು 100 ಮೀ. ಓಟದಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ರಾಜೇಶ್ ಮಡಿವಾಳ 93 ಕೆಜಿ ವಿಭಾಗದ ಪವರ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಮತ್ತು 90 ಪ್ಲಸ್ ವಿಭಾಗದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. ಸುಮಾರು 50 ದೇಶಗಳ ಕ್ರೀಡಾಳುಗಳು ಭಾಗವಹಿಸಿದ್ದರು. ಈ ಹಿಂದೆ ಕೊರಿಯಾದಲ್ಲಿ ನಡೆದ 13ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟದಲ್ಲೂ ಈ ಇಬ್ಬರು ಭಾಗವಹಿಸಿದ್ದರು.