ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆದಿದ್ದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಿದರು. 

ಸೋಲು-ಗೆಲುವನ್ನು ಸಮಾನವಾಗಿ ಪರಿಗಣಿಸಿ ಮುನ್ನಡೆಯುವ ಸಾಮರ್ಥ್ಯವನ್ನು ಕ್ರೀಡೆಗಳು ಕಲಿಸುವ ಜೊತೆಗೆ ಮತ್ತೊಬ್ಬರ ಗೆಲುವನ್ನು ಸಂಭ್ರಮಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪೌರಯುಕ್ತ ರಾಯಪ್ಪ, ವಾಲಿಬಾಲ್ ತರಬೇತುದಾರ ರಾಜೇಶ್ ಪತ್ತಾರ್, ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ, ಕಾಪು ತಾಲೂಕು ಕ್ರೀಡಾಧಿಕಾರಿ ರಿತೇಶ್ ಮೊದಲಾದವರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಪುರುಷರು ಹಾಗೂ ಮಹಿಳೆಯರ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾಟ ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article