ಕಾಂಗ್ರೆಸ್ ವತಿಯಿಂದ ರಾಹುಲ್ ನಿಂದನೆ ಖಂಡಿಸಿ ಪ್ರತಿಭಟನೆ
ಉಡುಪಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡರು ಅಸಾಂವಿಧಾನಿಕ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ ವಿರುದ್ಧ ಜಿಲ್ಲಾ ಕಾಂಗ್ರೆಸ್ ಭಾನುವಾರ ಪ್ರತಿಭಟನೆ ನಡೆಸಿತು.
ಜಿಲ್ಲಾ ಕಾಂಗ್ರೆಸ್ ಭವನದಿಂದ ಪಕ್ಷದ ಕಾರ್ಯಕರ್ತರು ಬ್ರಹ್ಮಗಿರಿ ಆಸ್ಕರ್ ಫೆರ್ನಾಂಡಿಸ್ ವೃತ್ತದ ವರೆಗೆ ಪಾದಯಾತ್ರೆ ನಡೆಸಿ, ಅಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಪ್ರಧಾನ ಕಾರ‍್ಯದರ್ಶಿ ಲಾವಣ್ಯ ಬಲ್ಲಾಳ್ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಗಾಂಧಿ ಕುಟುಂಬದ ಕೊಡುಗೆ ಬಹಳಷ್ಟಿದೆ. ನೆಹರೂ ಅವರಿಂದ ತೊಡಗಿ ಇಂದಿರಾ ಗಾಂಧಿ, ರಾಜೀವ ಗಾಂಧಿ, ಸೋನಿಯಾ ಗಾಂಧಿ ದೇಶಕ್ಕಾಗಿ ಬಹಳಷ್ಟು ತ್ಯಾಗ, ಕೊಡುಗೆ ಮಾತ್ರವಲ್ಲದೇ ಬಲಿದಾನಗಳನ್ನೂ ನೀಡಿದ್ದಾರೆ. ರಾಹುಲ್ ಗಾಂಧಿ ಕೊಡುಗೆಯನ್ನೂ ತಳ್ಳಿಹಾಕಲಾಗದು. ಬಿಜೆಪಿ ರಾಜಕೀಯ ದ್ವೇಷ ಹಾಗೂ ಕುಟುಂಬ ದ್ವೇಷದಿಂದ ರಾಹುಲ್ ಗಾಂಧಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಖಂಡನೀಯ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ‍್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪಕ್ಷ ಪ್ರಮುಖರಾದ ಭುಜಂಗ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಮೊದಲಾದವರು ಮಾತನಾಡಿದರು.
ಮುಖಂಡರಾದ ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ಪ್ರಖ್ಯಾತ್ ಶೆಟ್ಟಿ, ವೆರೋನಿಕಾ ಕರ್ನೇಲಿಯೊ, ಗೀತಾ ವಾಗ್ಳೆ, ದಿನಕರ ಹೇರೂರು, ಕೀರ್ತಿ ಶೆಟ್ಟಿ, ಹರೀಶ್ ಕಿಣಿ, ಶಬೀರ್ ಅಹ್ಮದ್, ಶಶಿಧರ್ ಶೆಟ್ಟಿ ಎಲ್ಲೂರು, ಸರ್ಫುದ್ದೀನ್ ಶೇಖ್, ಇಸ್ಮಾಯಿಲ್ ಆತ್ರಾಡಿ, ಜಯ ಕುಮಾರ್, ಡಾ. ಸುನಿತಾ ಶೆಟ್ಟಿ, ಮಮತಾ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಾಳ, ಉದ್ಯಾವರ ನಾಗೇಶ್ ಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಂಧ್ಯಾ ತಿಲಕ್‌ರಾಜ್, ದಿವಾಕರ ಕುಂದರ್, ಮೀನಾಕ್ಷಿ ಮಾಧವ ಬನ್ನಂಜೆ, ರಮಾನಂದ ಪೈ, ದಿಲೀಪ್ ಹೆಗ್ಡೆ, ಕಿಶೋರ್ ಕುಮಾರ್, ರಾಮದಾಸ್ ನಾಯ್ಕ, ಸತೀಶ್ ಕೊಡವೂರು, ಹಮೀದ್, ಕೇಶವ ಕೋಟ್ಯಾನ್ ಉಪಸ್ಥಿತರಿದ್ದರು.