ಅಯೋಧ್ಯೆಗೆ ಕೃಷ್ಣಾಪುರ ಶ್ರೀ ಭೇಟಿ
Wednesday, September 25, 2024
ಅಯೋಧ್ಯೆ: ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಅಯೋಧ್ಯೆಗೆ ಭೇಟಿ ನೀಡಿದ್ದು, ಬುಧವಾರ ಅಲ್ಲಿನ ಪೇಜಾವರ ಮಠದಲ್ಲಿ ಪೂಜಾವಿಧಿಗಳನ್ನು ಪೂರೈಸಿ ಪೇಜಾವರ ಶ್ರೀಗಳೊಂದಿಗೆ ಶ್ರೀರಾಮ ಮಂದಿರಕ್ಕೆ ತೆರಳಿ ಶ್ರೀರಾಮಲಲ್ಲಾ ದರ್ಶನ ಪಡೆದರು.
ಯಾಗ ಶಾಲೆಯಲ್ಲಿ ನಡೆಯುತ್ತಿರುವ ಶ್ರೀರಾಮ ತಾರಕ ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದರು.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಬಳಿಕ ಶ್ರೀಗಳ ಮೊದಲ ಭೇಟಿ ಇದಾಗಿದೆ.