ಸಿಎಂ ರಾಜೀನಾಮೆಗೆ ಆಗ್ರಹ: ಪ್ರಮೋದ್ ಮಧ್ವರಾಜ್
Tuesday, September 24, 2024
ಉಡುಪಿ: ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಸಿದ್ಧರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಗ್ರಹಿಸಿದ್ದಾರೆ.
ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಮತ್ತು ಮಗ ಯತೀಂದ್ರ ನೇರವಾಗಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೆಲವು ದೂರುದಾರರ ಅರ್ಜಿಗಳ ಮೇಲೆ ಮುಖ್ಯಮಂತ್ರಿ ವಿರುದ್ದ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಅದನ್ನು ಪ್ರಶ್ನಿಸಿ ಉಚ್ಛ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪ್ರಾಸಿಕ್ಯೂಷನ್‌ಗೆ ಒಳಗಾಗಬೇಕು. ಆ ಮೂಲಕ ನಮ್ಮ ದೇಶದ ಸಂವಿಧಾನದ ಕಾನೂನು ಎಲ್ಲರಿಗೂ ಒಂದೇ ಎನ್ನುವ ಭಾವನೆಯನ್ನು ಅವರು ಎತ್ತಿಹಿಡಿಯಬೇಕೆಂದು ಪ್ರಮೋದ್ ಆಗ್ರಹಿಸಿದ್ದಾರೆ.