ಕಸ್ತೂರಿ ರಂಗನ್ ವರದಿ ಕೈಬಿಡುವಂತೆ ಆಗ್ರಹ
Sunday, September 22, 2024
ಉಡುಪಿ: ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾಗಿದ್ದು, ಜನರ ಬದುಕು ಕಸಿಯುವ ಜನ ವಿರೋಧಿ ನಿಲುವಿನಿಂದ ಕೂಡಿದೆ. ಈ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಸೆ. 24ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಜಡ್ಕಲ್ ಮುದೂರು ಗ್ರಾಮಸ್ಥರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ಹೇಳಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ವರದಿಯಿಂದ ಜನವಸತಿ ಪ್ರದೇಶಗಳು ಪರಿಸರದ ಅತೀ ಸೂಕ್ಷ್ಮ ಅರಣ್ಯ ವ್ಯಾಪ್ತಿಗೆ ಒಳಪಡುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಜಿಲ್ಲೆಯಲ್ಲಿ ಸುಮಾರು 37ಕ್ಕೂ ಅಧಿಕ ಗ್ರಾಮಗಳು ಈ ವರದಿಯ ಅತೀ ಸೂಕ್ಷ್ಮ ವಲಯದ ವ್ಯಾಪ್ತಿಗೆ ಒಳಪಡುತ್ತದೆ.
ಈ ಹಿನ್ನೆಲೆಯಲ್ಲಿ ಜಡ್ಕಲ್ ಗ್ರಾ.ಪಂ.ನಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಇದರ ಸಾಧಕ ಬಾಧಕಗಳ ಬಗ್ಗೆ ಸಭೆ ನಡೆಸಿ ಜನರ ಅಭಿಪ್ರಾಯದಂತೆ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜೋಯ್ ವಿ.ಜೆ, ಗ್ರಾ.ಪಂ. ಸದಸ್ಯ ಲಕ್ಷ್ಮಣ ಶೆಟ್ಟಿ ಮುದೂರು, ರಂಜಿತ್ ಎಂ.ವಿ. ಮುದೂರು, ಜಿ.ಬಿ. ಮೋಹನ್ ಉಪಸ್ಥಿತರಿದ್ದರು