ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ


ಉಡುಪಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಡ್ಕಲ್-ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಪರಿಸರ ಹೋರಾಟಗಾರ ಕಲ್ಕುಳಿ ವಿಠಲ ಹೆಗ್ಡೆ ಮಾತನಾಡಿ, ಈ ವರದಿ ಜಾರಿಯಾಗಬೇಕು ಎನ್ನುವವರು ಇಂಗ್ಲಿಷ್ ಮಾಧ್ಯಮ ಅಥವಾ ವಿದೇಶಿ ಕೃಪಾಪೋಷಿತ ಪರಿಸರವಾದಿಗಳಾಗಿದ್ದಾರೆ. ಅದರ ಹಿಂದೆ ಬಹುದೊಡ್ಡ ಶಕ್ತಿ ಇದೆ. ಈ ವರದಿ ಬಗ್ಗೆ ವಿರೋಧ ಹಲವು ವರ್ಷಗಳಿಂದ ಹೋರಾಟ ನಡೆದಿದ್ದರೂ ಆರನೇ ಬಾರಿ ಅಧಿಸೂಚನೆ ಹೊರಡಿಸಿರುವುದನ್ನು ಗಮನಿಸಿದರೆ, ಈ ವರದಿ ಜಾರಿಯಾಗಬಹುದೆಂಬ ಅನುಮಾನ ಕಾಡುತ್ತಿದೆ ಎಂದು ಹೇಳಿದರು.

ಹಿಂದೆ ಮಾಧವ ಗಾಡ್ಗೀಳ್ ವರದಿ ಜಾರಿಗೆ ಹೊರಟಾಗ ಕೇರಳದಲ್ಲಿ ವ್ಯಾಪಕ ಹೋರಾಟ ನಡೆದಿತ್ತು. ಆ ಕಾರಣಕ್ಕೆ ಅದರ ಬದಲಾಗಿ ಕಸ್ತೂರಿ ರಂಗನ್ ವರದಿ ಸಿದ್ಧಪಡಿಸಲಾಗಿದೆ. ಅದರಲ್ಲಿರುವ ಅಂಶಗಳನ್ನೇ ಸ್ವಲ್ಪ ಬದಲಿಸಿ ಇದರಲ್ಲೂ ಬಳಸಲಾಗಿದೆ. ನಾವು ಎಚ್ಚೆತ್ತು ಸಂಘಟಿತ ಹೋರಾಟ ಮಾಡದಿದ್ದರೆ ಈ ವರದಿ ಜಾರಿ ಮಾಡಿಯೇ ಮಾಡುತ್ತಾರೆ ಎಂದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ, ಮಾಜಿ ಶಾಸಕ ಗೋಪಾಲ ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ, ವಾಸುದೇವ ಮುದೂರು ಮತ್ತಿತರರು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article