ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
Monday, September 23, 2024
ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿತ್ತು. ಆಸ್ಪತ್ರೆ ನವೀಕರಣಗೊಳ್ಳುತ್ತಿದ್ದು, ರೋಗಿಗಳು ಯಾರೂ ಇರಲಿಲ್ಲ. ನವೀಕೃತ ಆಸ್ಪತ್ರೆ ಮಂಗಳವಾರದಿಂದ ಪುನರಾರಂಭಕ್ಕೆ ಸಿದ್ಧತೆ ನಡೆಯುತ್ತಿರುವಾಗಲೇ ಬೆಂಕಿ ಅನಾಹುತ ಸಂಭವಿಸಿದೆ.
ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ಘಟಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.