ಮುಸ್ಲಿಮರ ಒತ್ತಡ: ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ

ಮುಸ್ಲಿಮರ ಒತ್ತಡ: ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ

ಉಡುಪಿ: ಈ ಬಾರಿಯ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕುಂದಾಪುರ ಸರ್ಕಾರಿ ಪವಿದಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅವರನ್ನು ರಾಜ್ಯ ಸರ್ಕಾರ ಕೊನೇ ಕ್ಷಣದಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯಿಂದ ಕೈಬಿಟ್ಟಿದೆ. ಮುಸ್ಲಿಮರ ಆಕ್ಷೇಪ ಈ ಘಟನೆಗೆ ಕಾರಣವಾಗಿದ್ದು, ಸರ್ಕಾರದ ನಡೆ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿದೆ.

ಕಳೆದ ಎರಡು ವರ್ಷದ ಹಿಂದೆ ಹಿಜಾಬ್ ವಿವಾದ ಸಂದರ್ಭ ವಿದ್ಯಾರ್ಥಿನಿಯರನ್ನು ಕಾಲೇಜಿನ ಗೇಟಿನಲ್ಲಿ ತಡೆದು ನಿಲ್ಲಿಸಿದ್ದ ರಾಮಕೃಷ್ಣ ಬಿ.ಜಿ. ಅವರನ್ನು ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಬಗ್ಗೆ ಮುಸ್ಲಿಮರು ಆಕ್ಷೇಪಿಸಿದ್ದರು. 

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸರ್ಕಾರ ರಾಮಕೃಷ್ಣ ಅವರನ್ನು ಪ್ರಶಸ್ತಿ ಪುರಸ್ಕೃತರ ಪಟ್ಟಿಯಿಂದ ಕೈ ಬಿಟ್ಟಿದ್ದು, ಈ ಬಗ್ಗೆ ಇಲಾಖೆಯಿಂದ ಸೂಚನೆ ಬಂದಿದೆ ಎನ್ನಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article