ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ: ಅಭಿನಂದನೆ

ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ: ಅಭಿನಂದನೆ


ಉಡುಪಿ: ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್‌ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದೆ.

ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಹತ್ತುವ ವೇಳೆ ಮಹಿಳೆಯೊಬ್ಬರು ಆಯತಪ್ಪಿ ಬಿದ್ದರು. ತಕ್ಷಣ ಸಮಯೋಚಿತ ಕಾರ್ಯಾಚರಣೆ ನಡೆಸಿದ ಆರ್‌ಪಿಎಫ್ ಸಿಬ್ಬಂದಿ ಅಪರ್ಣಾ ಅವರು ಮಹಿಳೆಯನ್ನು ರಕ್ಷಣೆ ಮಾಡಿದರು. ಮಹಿಳಾ ಸಿಬಂದಿಯ ಸಮಯ ಪ್ರಜ್ಞೆಯಿಂದ ರೈಲ್ವೆ ಮಹಿಳಾ ಪ್ಯಾಸೆಂಜರ್ ಅಪಾಯದಿಂದ ಪಾರಾದರು.

ಆರ್‌ಪಿಎಫ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಅವರನ್ನು ರೈಲ್ವೆ ಇಲಾಖೆಯವರು ಅಭಿನಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article