ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಪ್ರಾಂಶುಪಾಲರಾಗಿ ಪ್ರೊ. ಶ್ರೀಧರಪ್ರಸಾದ್ ಕಾಡೂರು

ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಪ್ರಾಂಶುಪಾಲರಾಗಿ ಪ್ರೊ. ಶ್ರೀಧರಪ್ರಸಾದ್ ಕಾಡೂರು


ಅಜ್ಜರಕಾಡು: ಜಿಲ್ಲೆಯ ಪ್ರತಿಷ್ಠಿತ ಲೀಡ್ ಕಾಲೇಜು ಆದ ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಪ್ರೊ. ಶ್ರೀಧರಪ್ರಸಾದ್ ಕಾಡೂರು ಇವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. 

ಇವರು ಈ ಮೊದಲು ಕಾಲೇಜಿನ ವಿಜ್ಞಾನ ನಿಕಾಯದ ಡೀನ್, ಕಾಲೇಜು ಶಿಕ್ಷಣ ಇಲಾಖೆಯ ಕರ್ನಾಟಕ ಜ್ಞಾನ ಆಯೋಗ ತಜ್ಞರ ಸಮಿತಿಯ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾಲಯ  ಮತ್ತು ಉಜಿರೆಯ ಎಸ್.ಡಿ.ಎಮ್ ಕಾಲೇಜಿನ ಶೈಕ್ಷಣಿಕ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಇವರು ಪ್ರತಿಷ್ಟಿತ  Project Inspire Award ಗೆ ಭಾಜನರಾಗಿದ್ದಾರೆ. ಇವರು ಕಾಸರಗೋಡು ಜಿಲ್ಲೆಯ ಪೈವಳಿಕೆಯ ನಿವೃತ್ತ ಕನ್ನಡ ಪಂಡಿತರಾದ ದಿ. ಕಾಡೂರು ಕೃಷ್ಣ ಭಟ್ ಮತ್ತು ದಿ. ಪರಮೇಶ್ವರಿ ಅವರ ಸುಪುತ್ರರಾಗಿದ್ದಾರೆ. 

ಇವರು ಈ ಮೊದಲು ಸರಕಾರಿ ವಿಜ್ಞಾನ ಕಾಲೇಜು ಹಾಸನ ಮತ್ತು ಮಂಗಳೂರಿನ ಎ.ಬಿ. ಶೆಟ್ಟಿ ದಂತ ವೈದ್ಯಕೀಯ ಸಂಸ್ಥೆಗಳಲ್ಲಿ  ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನಿಂದ ಬಾರ್ಕೂರು ಪ್ರಥಮ ದರ್ಜೆ ಕಾಲೇಜಿಗೆ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್., ಐ.ಕ್ಯೂ.ಎ.ಸಿ. ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಿಕೇತನ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಗೌರಿ ಭಟ್, ಕಾಲೇಜಿನ ಕಛೇರಿ ಅಧೀಕ್ಷಕಿ ಸುಧಾ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಕೃಷ್ಣ ಭಟ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article