ಕರಾಟೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಕರಾಟೆ ಸ್ಪರ್ಧೆ: ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ವಾಮಂಜೂರು ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾರಾದ ತನ್ವಿ.ಪಿ. ಸುವರ್ಣ ಮತ್ತು ಶಿರಾಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶ್ರೀ ವೆಂಕಟರಮಣ ಸ್ವಾಮೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೂಡಿಗೆ ಪಾಂಡುರಂಗ ಶೆಣೈ, ಕಾರ್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್, ಶ್ರೀ ವೆಂಕಟರಮಣ ಸ್ವಾಮೀ ಸಮೂಹ ಸಂಸ್ಥೆಗಳ ಸಂಚಾಲಕ ಕೆ. ರೇಖಾ ಶೆಣೈ, ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article