ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದ ವಿದ್ಯಾರ್ಥಿನಿ

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದ ವಿದ್ಯಾರ್ಥಿನಿ


ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶದಾನಗೈದು ಎಲ್ಲರ ಪ್ರಶಂಶೆಗೆ ಪಾತ್ರಳಾಗಿದ್ದಾಳೆ.

ವಿದ್ಯಾರ್ಥಿನಿ ಚಿರಣ್ಯ ಆರ್. ಪೂಜಾರಿ ಕೇಶದಾನಗೈದ ಇತರರಿಗೂ ಮಾದರಿಯಾಗಿದ್ದಾಳೆ. ಈಕೆ ವೀರಕಂಭ ಗ್ರಾಮದ ಗಣೇಶಕೋಡಿಯ ರಾಮಚಂದ್ರ ರೇಖಾ ದಂಪತಿಗಳ ಪುತ್ರಿಯಾಗಿದ್ದು, ತನ್ನ ಮಗಳನ್ನು ಕೇಶದಾನಗೈಯಲು ಪ್ರೇರಣೆ ನೀಡಿದ ರಾಮಚಂದ್ರರವರು ಓಂ ಶ್ರೀ ಸಾಯಿಗಣೇಶ ಸೇವಾ ಸಂಘದ ಸಾರಥಿಯಾಗಿ ಅಶಕ್ತರಿಗೆ ನೆರವು ನೀಡುತ್ತಾ ಯುವಶಕ್ತಿ ಸೇವಾಪಥ, ಯುವಶಕ್ತಿ ರಕ್ತನಿಧಿಯ ಮೂಲಕ ಸಮಾಜ ಸೇವೆಗೆ ಸದಾ ಕೈ ಜೋಡಿಸುವ ಓರ್ವ ನಿಷ್ಠಾವಂತ ಕಾರ್ಯಕರ್ತರಾಗಿರುತ್ತಾರೆ.

ವಿದ್ಯಾರ್ಥಿನಿಯ ಈ ಸೇವಾ ಕಾರ್ಯಕ್ಕೆ ವಿದ್ಯಾರ್ಥಿನಿಯ ಕುಟುಂಬಸ್ಥರು, ಗ್ರಾಮಸ್ಥರು ಶಾಲಾ ಶಿಕ್ಷಕರು, ಸಹಪಾಠಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article