ಮದ್ಯದ ಬಾಟಲಿ ಕಳವು
Monday, October 14, 2024
ಬೆಳ್ತಂಗಡಿ: ನಗರದ ಬಸ್ ನಿಲ್ದಾಣದ ಸಮೀಪವೇ ಇರುವ ತ್ರಿ ಸ್ಟಾರ್ ವೈನ್ಸ್ ಶಾಪ್ ನ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿಗಳನ್ನು ಕಳ್ಳತನ ಮಾಡಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.
ಅಂಗಡಿಯ ಹೊರಗಿನ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಅಂಗಡಿಯ ಒಳಗೆ ಇರಿಸಲಾಗಿದ್ದ ಸುಮಾರು ಆರು ಸಾವಿರ ರೂ.ಗಿಂತಲೂ ಹೆಚ್ಚು ನಗದನ್ನು ಅಪಹರಿಸಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.