ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರದಲ್ಲಿ ಸ್ಪೂರ್ತಿ ಬೈಲೂರು
Friday, October 25, 2024
ಕಾರ್ಕಳ: ಹಾಸನದ ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕಳೆದ ವಾರ ನಡೆದ ರಾಜ್ಯಮಟ್ಟದ ಶಿಬಿರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ ಸ್ಪೂರ್ತಿ ಬೈಲೂರು ಅವರು ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.
ಅವರು ಈಗ ದಕ್ಷಿಣ ವಲಯ ಆಯ್ಕೆ ಶಿಬಿರದಲ್ಲಿ ಪ್ರತಿಷ್ಠಿತ ದೆಹಲಿ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಸ್ಥಾನಕ್ಕಾಗಿ ಸ್ಪರ್ಧಿಸಲಿದ್ದಾರೆ.