ಪ್ರಿಯಕರನೊಂದಿಗೆ ಸೇರಿ ಪತಿಗೆ ವಿಷ ಉಣಿಸಿ ಕೊಲೆಗೈದ ಪತ್ನಿ

ಪ್ರಿಯಕರನೊಂದಿಗೆ ಸೇರಿ ಪತಿಗೆ ವಿಷ ಉಣಿಸಿ ಕೊಲೆಗೈದ ಪತ್ನಿ

ಕಾರ್ಕಳ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷ ಉಣಿಸಿ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಕಾರ್ಕಳ ಅಜೆಕಾರಿನ ಮರ್ಣೆ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗೀಡಾದವರನ್ನು ಬಾಲಕೃಷ್ಣ (44) ಎಂದು ಗುರುತಿಸಲಾಗಿದೆ. ಇವರ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ಹಿರ್ಗಾನದ ದಿಲೀಪ್ ಬಂಧಿತ ಆರೋಪಿಗಳು.

ಪ್ರಕರಣದ ಹಿನ್ನೆಲೆ..

ಕಳೆದ 25 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರನ್ನು ಕಾರ್ಕಳದ ರೋಟರಿ ಆಸ್ಪತ್ರೆಗೆ ದಾಖಲಿಸಿದಾಗ ಪರೀಕ್ಷಿಸಿದ ವೈದ್ಯರು ಅವರಿಗೆ ಕಾಮಾಲೆ ರೋಗವಿದೆ ಎಂದು ತಿಳಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ, ಮಂಗಳೂರು, ಬೆಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದ ಕಾರಣ ಅ.19 ರಂದು ಶನಿವಾರ ರಾತ್ರಿ ಮನೆಗೆ ಕರೆತರಲಾಗಿತ್ತು. ಮರುದಿನ ಅ.20 ರಂದು ಬೆಳಗ್ಗಿನ ಜಾವ 3.30 ರ ಹೊತ್ತಿಗೆ ಬಾಲಕೃಷ್ಣ ಅವರು ಮೃತಪಟ್ಟಿದ್ದಾರೆ. ದಿಢೀರ್ ಕಾಣಿಸಿಕೊಂಡ ಅನಾರೋಗ್ಯದಿಂದ ಬಾಲಕೃಷ್ಣ ಅವರು ಮೃತಪಟಿದ್ದರಿಂದ ಪ್ರತಿಮಾಳ ಅಣ್ಣ ಪದೇ ಪದೇ ವಿಚಾರಿಸಿದಾಗ ಸತ್ಯ ಬಯಲಾಗಿದೆ. ಪ್ರತಿಮಾ ಮತ್ತು ದಿಲೀಪ್ ತಮ್ಮ ಗೆಳೆತನಕ್ಕೆ ಅಡ್ಡ ಬರುತ್ತಿದ್ದ ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಯೋಚಿಸಿದ್ದರು. ಯೋಜನೆಯಂತೆ ದಿಲೀಪನು ಯಾವುದೋ ವಿಷ ಪದಾರ್ಥ ತಂದು, ಅದನ್ನು ಊಟದಲ್ಲಿ ಬೆರೆಸಿ ಕೊಟ್ಟರೆ ನಿಧಾನವಾಗಿ ಸಾಯುತ್ತಾರೆ ಎಂದು ಹೇಳಿ ಕೊಟ್ಟಿದ್ದ. ಅದರಂತೆ ನಾನು ಅವರಿಗೆ ಊಟದಲ್ಲಿ ಹಾಕಿ ಕೊಟ್ಟಿದ್ದೇನೆ. ನಂತರ ಬಾಲಕೃಷ್ಣ ಅವರಿಗೆ ಅಸೌಖ್ಯ ಉಂಟಾಗಿದ್ದು, ನಾನು ಹೇಳಿದಂತೆ ಅ.20 ರಂದು ಬೆಳಗಿನ ಜಾವ 1.30 ಗಂಟೆಗೆ ದಿಲೀಪನು ನಮ್ಮ ಮನೆಗೆ ಬಂದಿದ್ದು, ನಾವಿಬ್ಬರು ಸೇರಿ ಬೆಡ್‌ಶೀಟ್‌ಅನ್ನು ಬಾಲಕೃಷ್ಣರ ಮುಖಕ್ಕೆ ಒತ್ತಿ ಹಿಡಿದು ಅವರನ್ನು ಕೊಲೆ ಮಾಡಿರುತ್ತೇವೆ ಎಂದು ಪ್ರತಿಮಾ ಒಪ್ಪಿಕೊಂಡಿರುವುದಾಗಿ ಬಾಲಕೃಷ್ಣ ಅವರ ತಮ್ಮ ರಾಮಕೃಷ್ಣ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article