ಆಟೋ ಚಾಲಕ ಆತ್ಮಹತ್ಯೆ: ಸಬ್‌ಇನ್ಸ್‌ಪೆಕ್ಟರ್ ಅಮಾನತು
Saturday, October 12, 2024
ಕಾಸರಗೋಡು: ನಗರದ ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ರವರ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಕ್ಕೆ ಒಳಗಾದ ಚಂದೇರ ಠಾಣಾ ಸಬ್‌ಇನ್ಸ್‌ಪೆಕ್ಟರ್ ಪಿ. ಅನೂಪ್‌ನನ್ನು ಅಮಾನತುಗೊಳಿಸಲಾಗಿದೆ.
ಕಾಸರಗೋಡು ನಗರ ಠಾಣಾ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ಪಿ. ಅನೂಪ್‌ನನ್ನು ಆರೋಪದ ಹಿನ್ನಲೆಯಲ್ಲಿ ಚಂದೇರ ಠಾಣೆಗೆ ವರ್ಗಾಯಿಸಲಾಗಿತ್ತು.
ಸೋಮವಾರ ಅಬ್ದುಲ್ ಸತ್ತಾರ್ ರೈಲ್ವೆ ನಿಲ್ದಾಣ ಸಮೀಪದ ಕ್ವಾಟರ್ಸ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ನಗರದ ರಸ್ತೆಯೊಂದರಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಅಬ್ದುಲ್ ಸತ್ತಾರ್ ಅವರ ಆಟೋ ರಿಕ್ಷಾವನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಹಲವು ಬಾರಿ ಠಾಣೆಗೆ ಹೋಗಿ ಕೇಳಿಕೊಂಡರೂ ಆಟೋ ರಿಕ್ಷಾ ಬಿಟ್ಟು ಕೊಡಲು ಮುಂದಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು.