.jpeg)
ಪಟಾಕಿ ದುರಂತ: ನಾಲ್ವರ ಸೆರೆ
Wednesday, October 30, 2024
ಕಾಸರಗೋಡು: ಕಾಸರಗೋಡು ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿಯಾಟ ಮಹೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಸುಡುಮದ್ದು ಸ್ಫೋಟಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ನೀಲೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನ ಸಮಿತಿ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಭರತ್ ಮತ್ತು ಪಿ. ರಾಜೇಶ್ ಮತ್ತು ವಿಜಯನ್ ಬಂಧಿತರು.
ಪಟಾಕಿ ದುರಂತದಲ್ಲಿ 154 ಮಂದಿ ಗಾಯಗೊಂಡಿದ್ದು, ಈ ಪೈಕಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ. ದುರಂತದ ಬಗ್ಗೆ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ.