ಅ.9 ರಿಂದ 12ರವರೆಗೆ ಕುಂದಾಪುರ ದಸರಾ
ಕುಂದಾಪುರ: ಇಲ್ಲಿನ ಶ್ರೀ ನಾರಾಯಣಗುರು ಯುವಕ ಮಂಡಲದ ವತಿಯಿಂದ ನಡೆಯುವ ಕುಂದಾಪುರ ದಸರಾ ಮಹೋತ್ಸವವು ಅ.9 ರಿಂದ 12ರ ವರೆಗೆ ನಡೆಯಲಿದೆ.
ಅ.9 ರಂದು ಬೆಳಿಗ್ಗೆ 9.30ಕ್ಕೆ ಶ್ರೀ ಶಾರದಾ ದೇವಿಯ ವಿಗ್ರಹದ ‘ಪ್ರಾಣ ಪ್ರತಿಷ್ಠೆ ಪೂಜೆ’ ಪುಣ್ಯಾಹ, ಗಣಪತಿ ಪೂಜೆ, ಸಂಕಲ್ಪ, ಮಹಾ ಮಂಗಳಾರತಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಗಣಹೋಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5.30ಕ್ಕೆ ಬಿಲ್ಲವ ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಅ.10 ರಂದು ಬೆಳಿಗ್ಗೆ ಗಂಟೆ 9.30ಕ್ಕೆ ‘ಚಂಡಿಕಾ ಹೋಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ‘ಅನ್ನ ಸಂತರ್ಪಣೆ’ ಕಾರ್ಯಕ್ರಮ ನಡೆಯಲಿರುವುದು. ಸಂಜೆ ಭಜನಾ ಕಾರ್ಯಕ್ರಮ ರಾತ್ರಿ 7.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಭಾ ಕಾರ್ಯಕ್ರಮ ಬಳಿಕ ರಾತ್ರಿ 9 ಗಂಟೆಗೆ ಹಾಸ್ಯಮಯ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.
ಅ.11 ರಂದು ಬೆಳಿಗ್ಗೆ 9.30ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12.30ರಿಂದ ಮಹಾಪೂಜೆ, ಪ್ರಸಾದ ವಿತರಣೆ. ಸಂಜೆ 6 ಗಂಟೆಗೆ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ, ಮದ್ದುಗುಡ್ಡೆ ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ.
ಅ.12 ರಂದು ಶನಿವಾರ ವಿಜಯ ದಶಮಿ ಪ್ರಯುಕ್ತ ಬೆಳಿಗ್ಗೆ 11 ಗಂಟೆಗೆ ‘ಲಲಿತಾ ಸಹಸ್ರನಾಮ ಪಾರಾಯಣ’ ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ 3 ಗಂಟೆಗೆ ದೇವಿಯ ವಿಸರ್ಜನಾ ಪೂಜೆ, ಸಂಜೆ 5.30ಕ್ಕೆ ವೈಭವದ ಶ್ರೀ ಶಾರದೋತ್ಸವ ಶೋಭಾಯಾತ್ರೆಗೆ ಮಾನ್ಯ ಸಂಸದರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಲಿದ್ದಾರೆ ಎಂದು ಶ್ರೀ ನಾರಾಯಣಗುರು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.