ಟಿಪ್ಪರ್ ಬಡಿದು ಕಾಲೇಜು ವಿದ್ಯಾರ್ಥಿ ಸಾವು

ಟಿಪ್ಪರ್ ಬಡಿದು ಕಾಲೇಜು ವಿದ್ಯಾರ್ಥಿ ಸಾವು

ಕುಂದಾಪುರ: ಕಾಲೇಜ್ ತರಗತಿ ಮುಗಿಸಿ ಸ್ನೇಹಿತರೊಂದಿಗೆ ರಸ್ತೆ ಬದಿಯ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರದಲ್ಲಿ ಮಂಗಳವಾರ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಹಾಲಾಡಿ ರಸ್ತೆಯಲ್ಲಿನ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.
ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ. ಅತೀ ವೇಗವಾಗಿ ಹಿಂದಿನಿಂದ ಬಂದ ಶ್ರೀ ಮಹಾಗಣಪತಿ ಪ್ರಸನ್ನ ಎಂಬ ಹೆಸರಿನ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಸರಿದು ಧನುಷ್ ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಕುಂದಾಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article