ಅ. 10ರಂದು ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ

ಅ. 10ರಂದು ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ

ಮಂಗಳೂರು: ಕಲ್ಕೂರ ಪ್ರತಿಷ್ಠಾನದ ವತಿಯಿಂದ ಹಿರಿಯ ಸಾಹಿತಿ ದಿ.ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ  ಕಾರ್ಯಕ್ರಮ ಅ.10ರಂದು ಬೆಳಗ್ಗೆ 9.30ಕ್ಕೆ  ನಗರದ ಕೊಡಿಯಾಲಗುತ್ತು ರಸ್ತೆಯಲ್ಲಿರುವ ಪತ್ತುಮುಡಿ ಸೌಧದಲ್ಲಿ  ನಡೆಯಲಿದೆ ಎಂದು  ಕಲ್ಕೂರ ಪ್ರತಿಷ್ಠಾನ ಅಧಕ್ಷ ಪ್ರದೀಪ ಕುಮಾರ್ ಕಲ್ಕೂರ  ಹೇಳಿದರು.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಹುಶ್ರುತ ವಿದ್ವಾಂಸ ಡಾ.ಎಂ. ಪ್ರಭಾಕರ ಜೋಶಿ ಅವರಿಗೆ ‘ಕಾರಂತ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತದೆ. ಹೊಟೇಲ ಜನತಾ ಡಿಲಕ್ಸ್‌ನ ಪಾಲುದಾರ ಪತ್ತುಮುಡಿ ಸೂರ್ಯನಾರಾಯಣ ರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ. ಧರ್ಮ ಕಾರಂತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಕಾರಂತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದು, ಕಂಪ್ಯೂಟರ್ ಭಾಷಾ ವಿeನಿ ನಾಡೋಜ ಪ್ರೊ. ಕೆ.ಪಿ. ರಾವ್ ಅವರು ಶಿವರಾಮ ಕಾರಂತರ ಸಂಸ್ಮರಣೆ ಮಾಡಲಿದ್ದಾರೆ ಎಂದರು.

ಕಾರಂತ ಹುಟ್ಟುಹಬ್ಬದ ಪ್ರಯುಕ್ತ  ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಶಾರದಾ ವಿದ್ಯಾಲಯದ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಬಹುಮಾನ ವಿತರಿಸಲಿದ್ದು, ಅಂಚೆ ಕಾರ್ಡಿನಲ್ಲಿ ಕಾರಂತರ ಚಿತ್ರ ರಚನಾ ಸ್ಪರ್ಧೆಯ ವಿಜೇತರಿಗೆ ಉಡುಪಿಯ ‘ಸುಹಾಸಂ’ ಇದರ ಅಧ್ಯಕ್ಷ ಎಚ್. ಶಾಂತರಾಜ ಐತಾಳರು ಬಹುಮಾನ ನೀಡಲಿದ್ದಾರೆ ಎಂದರು.

ಈ ಸಂದರ್ಭ ಹಿರಿಯ ಗಮಕ ಹಾಗೂ ಗಡಿನಾಡ ಕನ್ನಡಪರ ಹೋರಾಟಗಾರ ತೆಕ್ಕೆಕೆರೆ ಶಂಕರನಾರಾಯಣ ಭಟ್ ಅವರಿಗೆ ‘ಕಲ್ಕೂರ ಗಮಕ ಸಿರಿ’ ಪುರಸ್ಕಾರ ಹಾಗೂ ಹೊರರಾಜ್ಯದ ವಲಸೆ ಕಾರ್ಮಿಕರ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ನೀಡುವಲ್ಲಿ ಮಹತ್ಸಾಧನೆಗೈದಿರುವ ಬೋಳಾರ ವೆಸ್ಟ್ ಉರ್ದು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಗೀತಾ ಜುಡಿತ್ ಸಲ್ಡಾನ ಅವರಿಗೆ ಕಲ್ಕೂರ ಶಿಕ್ಷಣ ಸಿರಿ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿ.ಕೆ.ಭಟ್ ಸೇರಾಜೆ, ಜನಾರ್ದನ ಹಂದೆ, ಪೂರ್ಣಿಮಾ ಪೇಜಾವರ, ವಿಜಯಲಕ್ಷ್ಮಿ ಶೆಟ್ಟಿ, ಮಂಜುಳಾ ಶೆಟ್ಟಿ , ಜಾನ್ ಚಂದ್ರನ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article