
ಅ.23ರಂದು ಅರವಿಂದ ಬೋಳಾರ್ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ
Monday, October 21, 2024
ಮಂಗಳೂರು: ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಅ.23 ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ
ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಜನಪ್ರಿಯ ನಟ ಅರವಿಂದ ಬೋಳಾರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.