ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಈಜು ಸ್ಪರ್ಧೆಯಲ್ಲಿ 3 ಚಿನ್ನದ ಪದಕ
Tuesday, October 1, 2024
ಮಂಗಳೂರು: ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ದಸರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು 3 ಚಿನ್ನದ ಪದಕಗಳನ್ನು ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಅಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್. ಪ್ರಧಾನ ಸಲಹೆಗಾರ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಹೆಚ್ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಶುಭಹಾರೈಸಿದರು.