
69ನೇ ಕರ್ನಾಟಕ ರಾಜ್ಯೋತ್ಸವ: ನಾಳೆ ಹಲ್ಮಡಿ ಶಾಸನದ ಪ್ರತಿಕೃತಿ ಅನಾವರಣ ಕಾರ್ಯಕ್ರಮ
Thursday, October 31, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಕಾಯ೯ಕ್ರಮ ನವೆಂಬರ್ 1 ರಂದು ನಗರದ ನೆಹರು ಮೈದಾನದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಬಳಿಕ ಪೆರೇಡ್ ಪಥಸಂಚಲನ, ಜಿಲ್ಲಾ ಪ್ರಶಸ್ತಿ ವಿತರಣೆ ಹಾಗೂ ವಿದ್ಯಾಥಿ೯ಗಳ ಸಾಂಸ್ಕೃತಿಕ ಕಾಯ೯ಕ್ರಮ ನಡೆಯಲಿದೆ.
ಹಲ್ಮಿಡಿ ಶಾಸನ ಅನಾವರಣ:
ಕಾರ್ಯಕ್ರಮ ಪೂರ್ವದಲ್ಲಿ ಪುರಭವನ ಮುಂಭಾಗದ ರಾಜಾಜಿ ಪಾಕ್೯ ಆವರಣದಲ್ಲಿ ಬೆಳಿಗ್ಗೆ 8.30ಕ್ಕೆ ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು. ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.