ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಚುನಾವಣೆ: ನಿಷೇದಾಜ್ಞೆ
Thursday, October 10, 2024
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಮತದಾನವು ಅ.21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅ.19ರಂದು ಸಂಜೆ 4ಗಂಟೆಯಿಂದ ಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.