
ವಿಧಾನ ಪರಿಷತ್ ಉಪಚುನಾವಣೆ ಶಾಂತಿಯುತವಾಗಿ ನಡೆಯಲು ಸಹಕರಿಸಿದವರಿಗೆ ಕೃತಜ್ಞತೆ
Monday, October 21, 2024
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಪ್ರಾಧಿಕಾರದ ಚುನಾವಣೆಯು ಎರಡೂ ಜಿಲ್ಲೆಗಳಲ್ಲಿ ಅತ್ಯಂತ ಶಾಂತಿಯುತ ಮತ್ತು ವ್ಯವಸ್ಥಿತವಾಗಿ ನಡೆಯಲು ಸಹಕರಿಸಿದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ, ಚುನಾವಣಾ ಕಾರ್ಯದ ಸಿಬ್ಬಂದಿಗಳಿಗೆ, ಪೊಲೀಸ್ ಇಲಾಖೆಗೆ ಮತ್ತು ಕಳೆದ ಎರಡು ವಾರಗಳಿಂದ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯ ಮಾಡಿರುವ ಕಾರ್ಯಕರ್ತರಿಗೆ, ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳಿಗೆ, ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ ಎಲ್ಲರಿಗೂ ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ವತಿಯಿಂದ ಕೃತಜ್ಙತೆಗಳನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.