
ವಿಧಾನ ಪರಿಷತ್ ಉಪಚುನಾವಣೆ: ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಶಾಸಕ ಕಾಮತ್ ಸಭೆ
Friday, October 18, 2024
ಮಂಗಳೂರು: ವಿಧಾನ ಪರಿಷತ್ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರದ (ಉಳ್ಳಾಲ) ಬೆಳ್ಮ ಪಂಚಾಯತ್, ಪಾವೂರು ಪಂಚಾಯತ್, ಇರಾ ಪಂಚಾಯತ್, ಸಜೀಪ ಪಡು ಚೇಳೂರು ಹಾಗೂ ಕೊಣಾಜೆ ಪಂಚಾಯತ್ ಸದಸ್ಯರ ಹಾಗೂ ಪ್ರಮುಖರ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.
ಪಕ್ಷದ ಹಿರಿಯರಾದ ಕೋಟ ಶ್ರೀನಿವಾಸ ಪೂಜಾರಿಯವರು ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಯಶಸ್ವಿಯಾಗಿ ಪ್ರತಿನಿಧಿಸಿ ಮೇಲ್ಪಂಕ್ತಿ ಹಾಕಿಕೊಟ್ಟವರು. ಇದೀಗ ಅವರು ಸಂಸದರಾಗಿ ಆಯ್ಕೆಯಾದ ಕಾರಣ ತೆರವಾಗಿರುವ ಸ್ಥಾನವನ್ನು ತುಂಬಲು ಪಕ್ಷದ ವರಿಷ್ಠರು ಯುವ ನಾಯಕ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅವಕಾಶ ಕಲ್ಪಿಸಿದ್ದಾರೆ. ಬಿಜೆಪಿ ಪಕ್ಷವು ಗ್ರಾಮ ಪಂಚಾಯತಿ ಸೇರಿದಂತೆ ಎಲ್ಲಾ ಪಂಚಾಯತಿ ಸದಸ್ಯರನ್ನು ಎಷ್ಟು ಗೌರವದಿಂದ ನಡೆಸಿಕೊಳ್ಳುತ್ತದೆ, ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಯಾವೆಲ್ಲಾ ಕಾರ್ಯ ಕೈಗೊಳ್ಳಲಾಗಿತ್ತು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಅದನ್ನು ಹೊಸದಾಗಿ ವಿವರಿಸಿ ಹೇಳಬೇಕಾಗಿಲ್ಲ. ಅದೇ ಮಾದರಿಯಲ್ಲಿ ನಮ್ಮ ಪಕ್ಷದ ಈಗಿನ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ರವರು ಕಾರ್ಯನಿರ್ವಹಿಸಲಿದ್ದು ಅವರಿಗೆ ತಮ್ಮ ಅಮೂಲ್ಯ ಮತಗಳ ಮೂಲಕ ಆಶೀರ್ವಾದ ಮಾಡಿ ಎಂದು ಶಾಸಕರು ವಿನಂತಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ಸಹಿತ ಅನೇಕರು ಉಪಸ್ಥಿತರಿದ್ದರು.