ಮರಳು ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ: ಇಬ್ಬರ ಬಂಧನ

ಮರಳು ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ: ಇಬ್ಬರ ಬಂಧನ


ಮಂಗಳೂರು: ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿ’ಸೋಜಾ ಎಂಬವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅಥಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ ತೌಸೀರ್ (31) ಬಂಧಿತ ಆರೋಪಿಗಳು.

ಅಕ್ಟೋಬರ್ 5ರಂದು ಅಡ್ಯಾರ್ ಬ್ರಿಡ್ಜ್ ಬಳಿ ಮರಳು ಮಾಫಿಯಾ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ಸಂದರ್ಭ ಪ್ರತಿಭಟನೆಯಲ್ಲಿ ಭಾಗಿಯಾಗಿ ನಿರ್ದೇಶನ ಮಾಡಿದ್ದ ಆಲ್ವಿನ್ ಡಿ’ಸೋಜಾ ಮೇಲೆ ಹಲ್ಲೆಗೆ ಮುಹಮ್ಮದ್ ಅಥಾವುಲ್ಲಾ ಪ್ರಚೋದನೆ ನೀಡಿದ್ದ ಎಮದು ಹೇಳಲಾಗಿದ್ದು, ತೌಸೀರ್ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದ. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article