ಮಕ್ಕಳು ತಮ್ಮ ಭಾಗವಹಿಸುವಿಕೆಯ ಹಕ್ಕನನ್ನು ಚಲಾಯಿಸಲು ತಮಗಿರುವ ರಕ್ಷಣಾ ವ್ಯವಸ್ಥೆ ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುವುದರ ಬಗ್ಗೆ ಅರಿವಿರಬೇಕು: ಶೋಭಾ ಬಿ.ಜಿ.

ಮಕ್ಕಳು ತಮ್ಮ ಭಾಗವಹಿಸುವಿಕೆಯ ಹಕ್ಕನನ್ನು ಚಲಾಯಿಸಲು ತಮಗಿರುವ ರಕ್ಷಣಾ ವ್ಯವಸ್ಥೆ ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುವುದರ ಬಗ್ಗೆ ಅರಿವಿರಬೇಕು: ಶೋಭಾ ಬಿ.ಜಿ.


ಮಂಗಳೂರು: ಮಕ್ಕಳ ರಕ್ಷಣಾ ವ್ಯವಸ್ಥೆ ಮತ್ತು ಸವಲತ್ತುಗಳನ್ನು ಪಡೆದುಕೊಳ್ಳುವುದರ ಬಗ್ಗೆ ಮಕ್ಕಳಿಗೆ ಹೆಚ್ಚಿನ ಅರಿವಿರಬೇಕು. ಪತ್ರಿಯೊಬ್ಬ ಮಕ್ಕಳು ವೇದಿಕೆ ಬಂದು ಮಾತನಾಡಬೇಕು, ಸಿಕ್ಕಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ತಿಳಿಸಿದರು.

ಅವರು ಇಂದು ಯೂನಿಸೆಫ್, ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಜಿಲ್ಲಾ ಬಾಲ ಭವನ ಕದ್ರಿ, ಶಿಕ್ಷಣ ಸಂಪನ್ಮೂಲ ಕೇಂದ್ರ ಒಕ್ಕೂಟ, ಪಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಮಂಗಳವಾರ ಕದ್ರಿ ಬಾಲಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್-24ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಹೆತ್ತವರು, ಶಿಕ್ಷಕರ ಪಾತ್ರ ಅತಿಮುಖ್ಯವಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ಮಕ್ಕಳ ಹಕ್ಕುಗಳ ಕುರಿತ ಹೆಚ್ಚಿನ ಮಾಹಿತಿ ಪಡೆಯಲು ಮಕ್ಕಳ ಹಕ್ಕುಗಳ ಸಂಸತ್ ಸಹಕಾರಿಯಾಗಿದ್ದು, ಮಕ್ಕಳು ಇದರ ಪ್ರಯೋಜನ ಪಡೆದುಕೊಂಡು ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಮಾತನಾಡಿ, ಒಂದು ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ 24 ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ಮೂಡಿ ಬಂದಿದೆ, ಹಾಗೂ ಮಕ್ಕಳ ನಾಲ್ಕು ತಂಡಗಳಾಗಿ ರಚಿಸಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವೇದಿಕೆಯಲ್ಲಿ ಪ್ರಸ್ತುತ ಪಡಿಸಿದ ಎಲ್ಲಾ ಮಕ್ಕಳಿಗೂ ಅಭಿನಂಧನೆ ತಿಳಿಸಿದರು. 

ಪಡಿ ಮಂಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆನ್ನಿ ಡಿಸೋಜ ಪ್ರಸ್ತಾವಿಕ ನುಡಿಗಳನ್ನಾಡಿ, ಮಕ್ಕಳ ಹಕ್ಕುಗಳ ಭಾಗವಹಿಸುವಿಕೆಯ ಹಕ್ಕಿನ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಮಕ್ಕಳು ತಮ್ಮ ಸಮಸ್ಯೆಗಳನ್ನು ಮತ್ತು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡುತ್ತಾರೆ, ಈಗಾಗಲೇ ಪ್ರಾರಂಭಗೊಂಡಿದೆ, ಈ ಒಂದು ಹಂತ ನವೆಂಬರ್ ತಿಂಗಳಿನಲ್ಲಿ ರಾಜ್ಯಮಟ್ಟದಲ್ಲಿ ಬೇರೆ ಬೇರೆ ಜಿಲ್ಲೆಯ ಮಕ್ಕಳು ಬಂದು ಮಾತನಾಡಲಿಕ್ಕೆ ಅವಕಾಶವಿರುತ್ತದೆ. ಅಂತಹ ಒಂದು ಪೂರ್ವಭಾವಿ ಸಭೆಯಾದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮವನ್ನು ನಡೆಸಲಾಗುತ್ತದೆ, ಇದೊಂದು ಒಳ್ಳೆಯ ವೇದಿಕೆ ಮಕ್ಕಳಿಗೆ ತಮ್ಮ ಸಮಸ್ಯೆ ಮತ್ತು ಬೇಡಿಕೆಗಳನ್ನು ವ್ಯಕ್ತಪಡಿಸಲು ಎಂದು ತಿಳಿಸಿದರು.

ದ.ಕ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್, ದ.ಕ. ಜಿಲ್ಲಾ ಮಕ್ಕಳ ಸಹಾಯವಾಣಿಯ ಗಣೇಶ್, ಹಿರಿಯ ಕಾರ್ಮಿಕ ಇನ್‌ಸ್ಪೆಕ್ಟರ್ ಮೇರಿ ಡಯಾಸ್, ದ.ಕ. ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ಕಮಲ ಗೌಡ, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಉಪಾಧ್ಯಕ್ಷೆ ಉಷಾ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು. ಕಮಲಗೌಡ ಸ್ವಾಗತಿಸಿ, ಧನ್ಯ ಶ್ರೀ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article