ಮಾಜಿ ಶಾಸಕ ಮೊಯ್ದೀನ್ ಬಾವಾರ ಸಹೋದರ ಬಿ.ಎಂ. ಮುಮ್ತಾಝ್ ಅಲಿ ನಾಪತ್ತೆ
Sunday, October 6, 2024
ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಉದ್ಯಮಿ, ಸಾಮಾಜಿಕ ಧಾರ್ಮಿಕ ಮುಂದಾಳು ಬಿ.ಎಂ. ಮುಮ್ತಾಝ್ ಅಲಿ ಅವರು ಭಾನುವಾರ ಬೆಳಗ್ಗಿನ ಜಾವದಿಂದ ನಾಪತ್ತೆಯಾಗಿದ್ದಾರೆ.
ಅವರ ಕಾರು ಉಡುಪಿ-ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಪತ್ತೆಯಾಗಿದೆ. ಅಲ್ಲದೆ, ಕಾರಿನ ಮುಂಭಾಗದ ಬಲಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿದೆ. ಸದ್ಯ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ಕೂಳೂರು ನದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.