ರಥಬೀದಿ ಸರ್ಕಾರಿ ಕಾಲೇಜಿನ ಎನ್.ಎಸ್ಎಸ್ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ

ರಥಬೀದಿ ಸರ್ಕಾರಿ ಕಾಲೇಜಿನ ಎನ್.ಎಸ್ಎಸ್ ಸ್ವಯಂ ಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ


ಮಂಗಳೂರು: ಅ.2 ರಂದು ಯೆನೆಪೋಯ ಯುನಿವರ್ಸಿಟಿ ಸಹಯೋಗದೊಂದಿಗೆ ' ಕ್ಲೀನ್ ಕೋಸ್ಟ್ ಸೇಫ್ ಸೀ' ಎಂಬ ಕಾರ್ಯಕ್ರಮದ ಅಂಗವಾಗಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛ ಭಾರತ್ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಸಮಾರೋಪ ತಣ್ಣೀರು ಬಾವಿ ಕಡಲ ಕಿನಾರೆಯ ಟ್ರೀ ಪಾರ್ಕನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂ ಸೇವಕರು ಭಾಗವಹಿಸಿ ಸ್ವಚ್ಛತೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಡಾ. ಲೋಕೇಶ್ ನಾಥ್, ಶ್ರೀಮತಿ ಶಾಂತಿ, ಉಪನ್ಯಾಸಕ ಸತ್ಯೇಂದ್ರ ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article